*✏✏ಕಾವೇರಿ: 9ರಂದು ಕೇಂದ್ರದ ಸಭೆ✏✏*
* ಕಾವೇರಿ ಜಲವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಕಳೆದ ತಿಂಗಳು ನೀಡಿರುವ ಆದೇಶದ ಬಗ್ಗೆ ಚರ್ಚಿಸಲು ಕೇಂದ್ರದ ಜಲಸಂಪನ್ಮೂಲ ಸಚಿವಾಲಯ ಇದೇ 9ರಂದು ಕಣಿವೆ ರಾಜ್ಯಗಳ ಅಧಿಕಾರಿಗಳ ಸಭೆ ಕರೆದಿದೆ.*
*ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳ ಸರ್ಕಾರಗಳ ಮುಖ್ಯ ಕಾರ್ಯದರ್ಶಿಯವರ ಸಭೆ ಆಯೋಜಿಸಲಾಗಿದೆ.*
*ಕಾವೇರಿ ಕುರಿತು ಸುಪ್ರೀಂ ಕೋರ್ಟ್ ಫೆಬ್ರುವರಿ 16ರಂದು ಪ್ರಕಟಿಸಿರುವ ಆದೇಶದಲ್ಲಿರುವ ಮಹತ್ವದ ಅಂಶಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.*
*ಕಾವೇರಿ ನದಿ ನೀರು ಹಂಚಿಕೆ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಯ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.*
*ಕೇಂದ್ರದ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಉಪೇಂದ್ರ ಪ್ರಸಾದ್ ಸಿಂಗ್ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.*
*ಕೇಂದ್ರದ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಕಣಿವೆ ವ್ಯಾಪ್ತಿಯ ಎಲ್ಲ ರಾಜ್ಯಗಳ ಮುಖ್ಯಮಂತ್ರಿಯವರ ಸಭೆ ಆಯೋಜಿಸಲು ಈಗಾಗಲೇ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ಸಭೆ ನಡೆಯಲಿರುವ ದಿನಾಂಕ ಅಂತಿಮಗೊಳಿಸಲಾಗುವುದು.*
*ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಆರು ವಾರದೊಳಗೆ ‘ಸ್ಕೀಂ’ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿರುವುದರಿಂದ ಈ ಸಭೆ ಆಯೋಜಿಸಲಾಗಿದೆ. ಆದರೆ, ತಕ್ಷಣಕ್ಕೇ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.*
No comments:
Post a Comment