*ರಾಜ್ಯ ಮುಕ್ತ ವಿವಿ ಕೋರ್ಸ್ ಗಳಿಗೆ ಸಿಕ್ತು ಮಾನ್ಯತೆ*
Tuesday, 06 Mar,
*ಶಿವು ಯಾದವಾಡ*
*ಬೆಂಗಳೂರು : ಮಾನ್ಯತೆ ರದ್ದುಗೊಂಡಿದ್ದ ರಾಜ್ಯ ಮುಕ್ತ ವಿವಿ ಕೋರ್ಸ್ ಗಳಿಗೆ ರಾಜ್ಯ ಸರ್ಕಾರವು ಪುನಃ ಮಾನ್ಯತೆ ಕೊಟ್ಟಿದ್ದು, ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.*
ವಿವಿ ಧನ ಸಹಾಯ ಆಯೋಗ ಕೆಸ್ ಒಯು ಮಾನ್ಯತೆ ರದ್ದುಗೊಳಿಸುವ ಪೂರ್ವದಲ್ಲಿ ಯುಜಿಸಿ ಮಾನ್ಯತೆ ಹೊಂದಿರುವ ತಾಂತ್ರಿಕೇತರ ಹಾಗೂ ರಾಜ್ಯದೊಳಗೆ ವ್ಯಾಸಂಗ ಮಾಡಿರುವ ಇನ್ ಹೌಸ್ ಕೋರ್ಸ್ ಗಳಿಗೆ 2013-14 ಹಾಗೂ 2014-15 ಶೈಕ್ಷಣಿಕ ವರ್ಷದಲ್ಲಿ ಪ್ರವೇಶಾತಿ ಪಡೆದು ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಉತ್ತೀರ್ಣರಾದವರ ಮುಂದಿನ ಶೈಕ್ಷಣಿಕ ವ್ಯಾಸಂಗಕ್ಕೆ ಅಂಕಪಟ್ಟಿಗಳನ್ನು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಮಾನ್ಯತೆ ನೀಡುವ ಸಂಬಂಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವ ರತ್ನಪ್ರಭಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು. ಸಮಿತಿ ರಚನೆ ಪ್ರಶ್ನಿಸಿ ರಾಜ್ಯ ಮುಕ್ತ ವಿವಿ ಶಿಕ್ಷಕೇತರ ನೌಕರರ ಸಂಘ ಹೈಕೋರ್ಟ್ ನಲ್ಲಿ ಕೇಸ್ ದಾಖಲಿಸಿತ್ತು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮಿತಿ ನೀಡಿರುವ ವರದಿಯು ಅನುಷ್ಠಾನಗೊಳಿಸುವುದರಿಂದ ಅರ್ಜಿದಾರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದ ಹಿನ್ನಲೆಯಲ್ಲಿ ಸರ್ಕಾರ ಸಮಿತಿ ಶಿಫಾರಸುಗಳನ್ನು ಅನುಷ್ಠಾನ ಮಾಡಿ ಆದೇಶ ಹೊರಡಿಸಿದೆ.
No comments:
Post a Comment